ಗುರುವಾರ ರಾಜ್ಯದಲ್ಲಿ ಕೊರೋನಾ ಸೋಂಕು ದಾಖಲಾದ ಸಂಖ್ಯೆ ಎಷ್ಟು ಗೊತ್ತ..? ಇಲ್ಲಿದೆ ನೋಡಿ

Soma shekhar

ಕೊರೋನಾ ವೈರಸ್ ದಿನದಿಂದ ದಿನಕ್ಕೆ ತನ್ನ ಉಗ್ರ ಪ್ರತಾವನ್ನು ಹೆಚ್ಚಿಸುತ್ತ ತನ್ನ ವ್ಯಾಪ್ತಸಿಯನ್ನು ದಿನದಿಂದ ದಿನಕ್ಕೆ ವಿಸ್ತರಿಸಿಕೊಳ್ಳುತ್ತಿದೆ. ಪ್ರಸ್ತುತದ ದಿನಗಳಲ್ಲಿ ನಗರಗಳಲ್ಲೇ ಇದ್ದ ಕೊರೋನಾ ವೈರಸ್ ಇಂದು ನಗರವನ್ನು ದಾಟಿ ಸಮುದಾಯಕ್ಕೂ ಹಬ್ಬುತ್ತಿರುವುದು ರಾಜ್ಯದಲ್ಲಿ ಕೊರೋನಾ ಹೆಚ್ಚಳಕ್ಕೆ ಕಾರಣವಾಗಿದೆ. ಇಂದು ಒಂದೇ ದಿನ ಕೊರೋನಾ ವೈರಸ್ ಸಾವಿರದ ಗಡಿಯನ್ನು ದಾಟಿ ಮುಂದೋಗಿದೆ ಇದು ನಾಡಿನ ಜನತೆಯಲ್ಲಿ ಆತಂಕವನ್ನು ಹೆಚ್ಚಿಸಿದೆ. ಅಷ್ಟಕ್ಕೂ ಇಂದು ಕರ್ನಾಟಕದಲ್ಲಿ ದಾಖಲಾದ ಕೊರೋನಾ ಸೋಂಕು ಎಷ್ಟು ಗೊತ್ತಾ,,?

 

ರಾಜ್ಯದಲ್ಲಿ ಕೋವಿಡ್ ಸೋಂಕಿನ ಅಟ್ಟಹಾಸ ಮಿತಿಮೀರುತ್ತಿದ್ದು, ಇಂದು ಒಂದೇ ದಿನ ಬರೋಬ್ಬರಿ 1,502 ಹೊಸ ಪ್ರಕರಣಗಳು ಪತ್ತೆಯಾಗಿವೆ. ಜತೆಗೆ 19 ಜನರು ಸಾವನ್ನಪ್ಪಿದ್ದಾರೆ. ಈ ಮೂಲಕ ಕೋವಿಡ್​-19 ಸೋಂಕಿತ ಸಂಖ್ಯೆ 18,016 ಹಾಗೂ ಸಾವಿನ ಸಂಖ್ಯೆ 272 ಆಗಿದೆ. ಬೆಂಗಳೂರಿನಲ್ಲೇ ಇಂದು ಒಂದೇ ದಿನ ಬರೋಬ್ಬರಿ 889 ಜನರಲ್ಲಿ ಮಹಾಮಾರಿ ಕಾಣಿಸಿಕೊಂಡಿದೆ.

 

ಇದರಿಂದಾಗಿ ಬೆಂಗಳೂರಿನಲ್ಲಿ ಸೋಂಕು ಸಮುದಾಯ ಮಟ್ಟಕ್ಕೆ ಹಬ್ಬಿರುವ ಸ್ಪಷ್ಟ ಸೂಚನೆ ಲಭಿಸತೊಡಗಿದೆ.ರಾಜಧಾನಿ ಬೆಂಗಳೂರಿನಲ್ಲಿ ಇಂದು ಮೂವರು ಮೃತಪಟ್ಟಿದ್ದಾರೆ. ಇದರೊಟ್ಟಿಗೆ ಕೊರೊನಾದಿಂದ ಈವರೆಗೆ ಬೆಂಗಳೂರಲ್ಲಿ 100 ಜನರು ಸಾವನ್ನಪ್ಪಿದ್ದರೆ. ಜೊತೆಗೆ ಈವರೆಗೆ ರಾಜ್ಯದಲ್ಲಿ ಕೊರೊನಾದಿಂದ ಪ್ರಾಣಕಳೆದುಕೊಂಡವರ ಸಂಖ್ಯೆ 272ಕ್ಕೇರಿದೆ.

 

ಇದೆಲ್ಲದರ ಮಧ್ಯೆ 8,334 ಜನರು ಕೋವಿಡ್‌ನಿಂದ ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ. ಇನ್ನುಳಿದಂತೆ 9406 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಸಂಜೆ ಆರೋಗ್ಯ ಇಲಾಖೆ ಬಿಡುಗಡೆಗೊಳಿಸಿರುವ ಬುಲೆಟಿನ್ ಪ್ರಕಾರ, ಬೆಂಗಳೂರು ನಗರ 889, ದಕ್ಷಿಣ ಕನ್ನಡ 90, ಮೈಸೂರು 68, ಬಳ್ಳಾರಿ 65, ಧಾರವಾಡ 47, ವಿಜಯಪುರ 39, ರಾಮನಗರ 39, ಕಲಬುರಗಿ 38, ಬೀದರ್ 32, ತುಮಕೂರು 26, ಶಿವಮೊಗ್ಗ 23, ಮಂಡ್ಯ 19,

ಉತ್ತರ ಕನ್ನಡ 17, ಹಾಸನ 15, ಉಡುಪಿ 14, ಕೋಲಾರ 12, ರಾಯಚೂರು 11, ಬಾಗಲಕೋಟೆ 10, ದಾವಣಗೆರೆ 8, ಯಾದಗಿರಿ 7, ಬೆಳಗಾವಿ 7, ಕೊಡಗು 6, ಬೆಂಗಳೂರು ಗ್ರಾಮಾಂತರ 5, ಹಾವೇರಿ 4, ಕೊಪ್ಪಳ 4, ಚಿತ್ರದುರ್ಗ 3, ಗದಗ 2, ಚಿಕ್ಕಬಳ್ಳಾಪುರ 1 ಮತ್ತು ಚಿಕ್ಕಮಗಳೂರಿನಲ್ಲಿ ಒಂದು ಕೊರೊನಾ ಪ್ರಕರಣ ಬೆಳಕಿಗೆ ಬಂದಿದೆ.

 

ಒಟ್ಟು 18,016ರಲ್ಲಿ 9,406 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಇಂದು ಒಟ್ಟು 271 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇತ್ತ ಬೆಂಗಳೂರು ಕೊರೊನಾ ಸಾವಿನ ಸಂಖ್ಯೆಯಲ್ಲಿ ಶತಕ ದಾಖಲಿಸಿದೆ. ಇನ್ನು, ಬೆಂಗಳೂರಿನಲ್ಲಿ ಸೋಂಕು ಸಾಮುದಾಯಿಕವಾಗಿ ವ್ಯಾಪಿಸುತ್ತಿರುವುದು ಕಳವಳಕಾರಿ ಅಂಶ. ಆದರೆ, ಬೆಂಗಳೂರು ನಗರವು ರಾಜ್ಯದ ಇತರ ಭಾಗಗಳಿಗೂ ಕಂಟಕವಾಗಿ ಪರಿಣಮಿಸುತ್ತಿರುವುದು ಬಹಳ ಸ್ಪಷ್ಟವಾಗಿದೆ.

 

ದಕ್ಷಿಣ ಕನ್ನಡ, ಮೈಸೂರು, ಬಳ್ಳಾರಿ, ಧಾರವಾಡ, ವಿಜಯಪುರ, ರಾಮನಗರ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಗಣನೀಯ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗಿದ್ದಾರೆ. ಇವರಲ್ಲಿ ಮೈಸೂರು, ದಾವಣಗೆರೆ, ರಾಮನಗರ, ತುಮಕೂರು ಮೊದಲಾದ ಜಿಲ್ಲೆಗಳಿಗೆ ಬೆಂಗಳೂರೇ ವಿಲನ್ ಆಗಿದೆ.

 

ಬೆಂಗಳೂರಿಗೆ ಬಂದು ಹೋದ ಆ ಜಿಲ್ಲೆಯ ಜನರಿಗೆ ಸೋಂಕು ತಗುಲುತ್ತಿದೆ. ಇದು ಸರ್ಕಾರವನ್ನು ಚಿಂತೆಗೀಡು ಮಾಡಿದೆ. ನಗರದಲ್ಲಿ ಕೊರೋನಾ ಸೋಂಕು ಸಾಮುದಾಯಿಕವಾಗಿ ಹರಡುತ್ತಿರುವುದರಿಂದ ನಿಯಂತ್ರಣ ಕಷ್ಟಸಾಧ್ಯವಾಗುತ್ತಿದೆ. ರೋಗಿಗಳ ಸೋಂಕಿನ ಮೂಲ ಹುಡುಕುವುದೂ ಅಸಾಧ್ಯವಾಗಿದೆ.

 

Find Out More:

Related Articles: