ಬೆಂಗಳೂರು: ನೀನಾಸಂನಲ್ಲಿ ಇತ್ತೀಚೆಗೆ ಭಾರೀ ಬೆಳವಣಿಗೆಗಳಾಗುತ್ತಿದ್ದು, ಇದೀಗ ನೀನಾಸಂ ಟೀಂನದ್ದೇ ಇದೀಗ ಹೊಚ್ಚ ಹೊಸ ಚಿತ್ರದ ಕಂಪ್ಲೀಟ್ ಚಿತ್ರೀಕರಣ ಮುಕ್ತಾಯವಾಗಿದ್ದು, ಈ ಚಿತ್ರದಲ್ಲಿ ಪೂರ್ಣಚಂದ್ರ ತೇಜಸ್ವಿಯವರು ಸಂಗೀತ ನೀಡಿದ್ದಾರೆ. ಹಾಗಾದರೆ ಆ ಚಿತ್ರ ಯಾವುದು? ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೇಲ್ಸ್.
ಮಹಾನಗರಿ ಬೆಂಗಳೂರಿನ ಶ್ರೀನೀಲಕಂಠೇಶ್ವರ ಸಿನಿ ಕಂಬೈನ್ಸ್ ಲಾಂಛನದಲ್ಲಿ ತಯಾರಾಗಿರುವ ‘ಹಿಕೋರಾ` ಚಿತ್ರತಂಡ ಚಿತ್ರಿಕರಣ ಮುಗಿಸಿದ ಸಂತಸದಲ್ಲಿದ್ದು, ಪೋಸ್ಟ್ ಪ್ರೊಡ ಕ್ಷನ್ ಕೆಲಸಗಳಲ್ಲಿ ತೊಡಗಿಕೊಂಡಿದೆ. ನೀನಾಸಂನಲ್ಲಿ ಸುಮಾರು 18 ವರ್ಷಗಳ ಕಾಲ ವಿದ್ಯಾರ್ಥಿಗಳಿಗೆ ಅನ್ನ ಉಣಬಡಿಸಿದ ರತ್ನಶ್ರೀಧರ್ ಈ ಚಿತ್ರದ ನಿರ್ಮಾಪಕರು. ಈ ಚಿತ್ರದ ನಿರ್ದೇಶಕ ಮತ್ತು ನಾಯಕ ಎಂ.ಜಿ.ಕೃಷ್ಣ, ಯಶವಂತ ಶೆಟ್ಟಿ, ಸ್ಪಂದನ ಪ್ರಸಾದ್, ಮಹಾಂತೇಶ್, ಸರ್ದಾರ್ ಸತ್ಯ ಮುಂತದಾವರೆಲ್ಲ ನೀನಾಸಂನವರೇ.
ಹಿಕೋರಾ ಚಿತ್ರದ ನಾಯಕ ನಟನಾಗಿರುವ ಕೃಷ್ಣಪೂರ್ಣ ಈ ಚಿತ್ರದ ನಿರ್ದೇಶಕರೂ ಹೌದು. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಕೃಷ್ಣಪೂರ್ಣ ರವರೇ ಬರೆದಿರುವುದು ವಿಶೇಷವಾಗಿದೆ. ಪೂರ್ಣಚಂದ್ರತೇಜಸ್ವಿ ಸಂಗೀತ ನೀಡಿರುವ ಈ ಚಿತ್ರಕ್ಕೆ ಆಪ್ತಮಿತ್ರ, ಸಂಗೊಳ್ಳಿ ರಾಯಣ್ಣ ಖ್ಯಾತಿಯ ರಮೇಶ್ ಬಾಬು ಅವರ ಛಾಯಾಗ್ರಹಣವಿದೆ. ಕಿರಣ್ ಸಂಕಲನ, ಮದನ್ ಹರಿಣಿ ನೃತ್ಯ ನಿರ್ದೇಶನ ಹಾಗೂ ಡಾ.ನಾಗರಾಜ್ ಅವರ ಕಲಾ ನಿರ್ದೇಶನವಿರುವ ಈ ಚಿತ್ರದ ಸಹ ನಿರ್ಮಾಪಕರು ಕುಮಾರಿ ಆದ್ಯ. ಸುನೀಲ್ ಯಾದವ್ ಹಾಗೂ ವಿನಾಯಕರಾಮ ಕಲಗಾರು ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ. ಪ್ರೊಡಕ್ಷನ್ ಕಂಟ್ರೋಲರ್ ಆಗಿ ಅಭಿರಾಮ್ ಕಾರ್ಯ ನಿರ್ವಹಿಸಿದ್ದಾರೆ. ಅಂದುಕೊAಡಿದ್ದ ಕ್ಕಿಂತಲೂ ಅದ್ಭುತವಾಗಿ ಚಿತ್ರ ಮೂಡಿಬಂದಿರುವುದಕ್ಕೆ ಚಿತ್ರತಂಡ ಸಂತಸದಲ್ಲಿದೆ.
ಕೃಷ್ಣಪೂರ್ಣ, ಯಶ್ವಂತ್ ಶೆಟ್ಟಿ, ಸ್ಪಂದನಾ ಪ್ರಸಾದ್, ಪ್ರಕಾಶ್ ಬೆಳವಾಡಿ, ಸರ್ದಾರ್ ಸತ್ಯ, ಮಹಾಂತೇಶ್ ರಾಮದುರ್ಗ, ಆನಂದ್ ಮಾಸ್ಟರ್, ಲಾವಂತಿ, ಮುನಾಲಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಖ್ಯಾತ ನಟ ಪ್ರಕಾಶ್ ಬೆಳವಾಡಿ ಅತೀ ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದಾರೆ. ಹೀಕೊರಾ ಚಿತ್ರವು ಅದ್ಭುತವಾಗಿ ಮೂಡಿಬಂದಿದ್ದು ಶೇ ನೂರಕ್ಕೆ ನೂರರಷ್ಟು ಚಿತ್ರ ಗೆಲ್ಲಲಿದೆ ಎಂಬುದು ನಿರ್ದೇಶಕ ನಟರ ಅಭಿಮತವಾಗಿದೆ.