ಪೌರತ್ವ ಸಂವಿಧಾನದ ಬಗ್ಗೆ ಸೋನಿಯಾ ಗಾಂಧಿ ಮಾತು

Soma shekhar
   
ನವದೆಹಲಿ: ರಾಷ್ಟ್ರಾದ್ಯಂತ ದಿನ ಕಳೆದಂತೆ ಪೌರತ್ವ ಕಾಯ್ದೆ ಕುರಿತು ತೀವ್ರ ಪ್ರತಿಭಟನೆಗಳು ಹೆಚ್ಚಾಗುತ್ತಿದ್ದು, ಹಲವೆಡೆ ಲಾಟಿ ಚಾರ್ಜ್, ಗುಂಡು ಹಾರಿಸುವಿಕೆ ಕೂಡ ನಡೆದಿವೆ. ಪ್ರತಿಭಟನೆಯಲ್ಲಿ ಕೆಲವರು ಪ್ರಾಣವನ್ನೇ ತೆತ್ತಿದ್ದಾರೆ. ಆದರೆ ಇದರ ಕುರಿತು ಪೌರತ್ವ ಕಾಯ್ದೆ ಜಾರಿಯಾಗಲೇ ಬೇಕೆಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಇದೀಗ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಾತ ನಾಡಿದ್ದಾರೆ. ಆ ಎಕ್ಸಕ್ಲೂಸಿವ್ ಮಾಹಿತಿ ಇಲ್ಲಿದೆ ನೋಡಿ. 
 
ಪೌರತ್ವ ತಿದ್ದುಪಡಿ ಕಾನೂನಿನ ವಿರುದ್ಧ ರಾಷ್ಟ್ರವ್ಯಾಪಿ ನಡೆದ ಪ್ರತಿಭಟನೆಯಲ್ಲಿ ಜನರ ಧ್ವನಿಯನ್ನು ಕೇಂದ್ರ ಸರ್ಕಾರ ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಸೋನಿಯಾ ಗಾಂಧಿ ಶುಕ್ರವಾರ ವಿಡಿಯೋ ಹೇಳಿಕೆಯಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. ಜನರ ಭಿನ್ನಮತವನ್ನು ಹತ್ತಿಕ್ಕಲು ಬಿಜೆಪಿ ಸರ್ಕಾರವು ವಿವೇಚನಾರಹಿತ ಶಕ್ತಿಯನ್ನು ಬಳಸಿತು. ಇಂತಹ ಸನ್ನಿವೇಶಗಳು ಪ್ರಜಾಪ್ರಭುತ್ವದಲ್ಲಿ ಸ್ವೀಕಾರಾರ್ಹವಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದರು. ಅಲ್ಲದೇ, ಕಾಂಗ್ರೆಸ್ ಪಕ್ಷವು ವಿದ್ಯಾರ್ಥಿಗಳೊಂದಿಂಗೆ ಒಗ್ಗಟ್ಟಿನಲ್ಲಿ ನಿಂತಿದೆ. ಕೇಂದ್ರ ಸರ್ಕಾರ ಪ್ರತಿಭಟನೆಗೆ ಬಗ್ಗುತ್ತಿಲ್ಲ. ಅಲ್ಲದೇ ಪ್ರತಿಭಟನಾ ನಿರತರನ್ನು ಲಾಟಿ ಚಾರ್ಜ್ ಮಾಡಿಸುತ್ತಿದೆ. ಇದು ಸಂವಿಧಾನ ಬಾಹಿರ ವಾದದ್ದು. ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳಿವೆ, ಮೂಲಭೂತ ಹಕ್ಕುಗಳನ್ನು ಎತ್ತಿಹಿಡಿಯಲು ಮತ್ತು ನಮ್ಮ ಸಂವಿಧಾನದ ಮೌಲ್ಯಗಳನ್ನು ರಕ್ಷಿಸಲು ನಾವು ಸಂಪೂರ್ಣವಾಗಿ ಬದ್ಧರಾಗಿದ್ದೇವೆ ಎಂದು ಕಾಂಗ್ರೆಸ್ ಜನರಿಗೆ ಭರವಸೆ ನೀಡುತ್ತದೆ ಎಂದರು.
 
ಅಂತೆಯೇ, ಪ್ರಜಾಪ್ರಭುತ್ವದಲ್ಲಿ ಜನರಿಗೆ ಸರ್ಕಾರದ ತಪ್ಪು ನಿರ್ಧಾರಗಳು ಮತ್ತು ನೀತಿಗಳ ವಿರುದ್ಧ ಧ್ವನಿ ಎತ್ತುವ ಮತ್ತು ಅವರ ಕಾಳಜಿಯನ್ನು ನೋಂದಾಯಿಸಿಕೊಳ್ಳುವ ಹಕ್ಕಿದೆ. ನಾಗರಿಕರ ಮಾತುಗಳನ್ನು ಆಲಿಸುವುದು ಮತ್ತು ಅವರ ಕಳವಳಗಳನ್ನು ಪರಿಹರಿಸುವುದು ಸರ್ಕಾರದ ಕರ್ತವ್ಯ ಎಂದು ಅವರು ಹೇಳಿದರು. ಇನ್ನು ಕೆಲವು ನಗರಗಳಲ್ಲಿ ಪ್ರತಿಭಟನಾಕಾರರ ಮೇಲೆ ಹಿಂಸಾಚಾರ, ಕಲ್ಲು ಎಸೆಯುವುದು ಮತ್ತು ಪೊಲೀಸರು ಗುಂಡು ಹಾರಿಸಿದ ಘಟನೆಗಳು ನಡೆದಿವೆ. ಪೌರತ್ವ ತಿದ್ದುಪಡಿ ಕಾಯ್ದೆ ತಾರತಮ್ಯವಾಗಿದೆ. ರಾಷ್ಟ್ರವ್ಯಾಪಿ ಉದ್ದೇಶಿತ ಎನ್‌ಆರ್‌ಸಿ ವಿಶೇಷವಾಗಿ ಬಡವರಿಗೆ ಮತ್ತು ದುರ್ಬಲರಿಗೆ ನೋವುಂಟು ಮಾಡುತ್ತದೆ ಎಂದು ಸೋನಿಯಾ ಗಾಂಧಿ ಅವರು ತಿಳಿಸಿದ್ದಾರೆ.

Find Out More:

Related Articles: