
ಬಿಜೆಪಿ ಸರ್ಕಾರ ರಚನೆ ನಿಶ್ಚಿತ ಎಂದ ಶೆಟ್ಟರ್
ಬಿಜೆಪಿ ನಾಯಕರು ಒಬ್ಬೊಬ್ಬರಾಗಿಯೇ ಸರ್ಕಾರ ರಚನೆ ಕುರಿತು ಹೇಳಿಕೆ ನೀಡುತ್ತಿದ್ದಾರೆ. ಇದೀಗ ಮಾತನಾಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕೂಡ ಅದನ್ನೇ ಪುನರುಚ್ಚರಿಸಿದ್ದಾರೆ. ಬಿಜೆಪಿಯು ಸರ್ಕಾರ ರಚಿಸುವುದು ನಿಶ್ಚಿತ ಎಂದಿದ್ದಾರೆ.
ಹೌದು, ಆಂತರಿಕ ಕಚ್ಛಾಟ, ಭಿನ್ನಾಭಿಪ್ರಾಯದಿಂದ ಜರ್ಜರಿತವಾಗಿರುವ ಕಾಂಗ್ರೆಸ್-ಜೆಡಿಎಸ್ ಸರ್ಕಾರ ಒಂದು ವೇಳೆ ಬಿದ್ದು ಹೋದರೆ, 105 ಶಾಸಕರನ್ನು ಹೊಂದಿರುವ ಬಿಜೆಪಿಯು ಸರ್ಕಾರ ರಚನೆ ಮಾಡುವುದು ಖಂಡಿತ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಕಮೀಶನ್ ದಂಧೆ ನಡೆಸಿದೆ. ಜಿಂದಾಲ್ ಕಂಪನಿಗೆ ಕಡಿಮೆ ದರದಲ್ಲಿ ಭೂಮಿ ನೀಡಿದೆ. ಇದನ್ನು ವಿರೋಧಿಸಿ ಬಿಜೆಪಿ ಹೋರಾಟ ಮಾಡುವುದಾಗಿ ಅವರು ಎಚ್ಚರಿಸಿದರು.