ಅಯೋಧ್ಯೆ ತೀರ್ಪಿನ ಕುರಿತು ಯಾರೂ ಮಾತನಾಡಬೇಡಿ ಎಂದ ಯೋಗಿ ಆದಿತ್ಯನಾಥ್

somashekhar
ಲಕ್ನೋ(ಉತ್ತರ ಪ್ರದೇಶ): ರಾಷ್ಟ್ರಾದ್ಯಂತ ಸಂಚಲನ ಮೂಡಿಸಿರುವ ಅಯೋಧ್ಯೆ ತೀರ್ಪು ದಿನಕಳೆದಂತೆ ಕುತೂಹಲ ಹುಟ್ಚಿಸುತ್ತಿದೆ. ಅದೇ ರೀತಿ ಇದೀಗ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಯೋಧ್ಯೆ ತೀರ್ಪಿನ ಕುರಿತು ಯಾರು ಹೇಳಿಕೆಗಳು ಕೊಡಬೇಡಿ ಎಂದು ಹೇಳಿದ್ದಾರೆ. ಅವರು ಯಾರು? ಅವರಾರು ಕೂಡ ಏಕೆ ಮಾತನಾಡಬಾರದು? ಎಂಬ ಕುತೂಹಲಕಾರಿ ಸುದ್ದಿ ಇಲ್ಲಿದೆ ನೋಡಿ. 

 ಅಯೋಧ್ಯೆ ಪ್ರಕರಣದ ತೀರ್ಪು ಬರುವವರೆಗೆ ಹಾಗೂ ಬಂದ ನಂತರ ಯಾರೊಬ್ಬರೂ ವಿವಾದಾತ್ಮಕ ಹೇಳಿಕೆ ನೀಡಬಾರದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಸಚಿವರಿಗೆ ಖಡಕ್ ಸೂಚನೆ ನೀಡಿದ್ದಾರೆ.ರಾಮ ಜನ್ಮ ಭೂಮಿ ಹಾಗೂ ಬಾಬರಿ ಮಸೀದಿ ವಿವಾದ ಪ್ರಕರಣ ತೀರ್ಪು ಶೀಘ್ರದಲ್ಲಿಯೇ ಹೊರ ಬೀಳಲಿದೆ. ಇದರ ಬೆನ್ನಲ್ಲೇ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಸಚಿವರು ಹಾಗೂ ಪಕ್ಷದ ಕಾರ್ಯಕರ್ತರಿಗೆ ಈ ಕಿವಿ ಮಾತು ಹೇಳಿದ್ದಾರೆ. ಯಾವುದೇ ಕಾರಣಕ್ಕೂ ರಾಮ ಜನ್ಮ ಭೂಮಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಕೂಡದರು ಎಂದು ತಾಕೀತು ಮಾಡಿದ್ದಾರೆ.

ಈ ಕುರಿತು ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ಸಚಿವರೇ ದೃಢಪಡಿಸಿದ್ದು, ಅನಗತ್ಯವಾಗಿ ಪ್ರತಿಕ್ರಿಯಿಸದಂತೆ ಮುಖ್ಯಮಂತ್ರಿ ನಮಗೆ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.ತೀರ್ಪು ಯಾರ ಪರವಾಗಿ ಬಂದರೂ ಯಾವುದೇ ಸಚಿವರು ವಿವಾದತ್ಮಕ ಹೇಳಿಕೆ ನೀಡಬಾರದು. ಈ ಕುರಿತು ಬಿಜೆಪಿ ದೊಡ್ಡ ಕಾರ್ಯಕ್ರಮದ ಮೂಲಕ ನಿರ್ದೇಶನ ನೀಡಿದೆ ಎಂದು ತಿಳಿದು ಬಂದಿದೆ.ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಸಹ ಪ್ರಯಾಗರಾಜ್‌ನಲ್ಲಿ ಸೂಕ್ಷ್ಮ ವಿಷಯಗಳ ಕುರಿತು ಯಾವುದೇ ಆಚರಣೆ ನಡೆಸಬಾರದು. ತೀರ್ಪು ಯಾರ ಪರವಾಗಿ ಬಂದರೂ ಸಹ ಈ ಕುರಿತು ಸಂಭ್ರಮಾಚರಣೆ ಮಾಡಬಾರದು. ಇದು ಇನ್ನೊಂದು ಸಮುದಾಯವನ್ನು ಕೆರಳಿಸುತ್ತದೆ. ಹಿಂದೂಗಳು ಹಾಗೂ ಮುಸ್ಲಿಮರು ಸಾಮರಸ್ಯ ಕಾಪಾಡಿಕೊಳ್ಳಬೇಕು ಎಂದಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘವು ಸಹ ಜಾಗೃತಿ ಮೂಡಿಸುವಲ್ಲಿ ನಿರತವಾಗಿದೆ. 

ಯೋಗಿ ಆದಿತ್ಯನಾಥ್ ಅತೀಯಾದ ದೈವಭಕ್ತಿ ಉಳ್ಳವರಾಗಿದ್ದು, ಅಯೋಧ್ಯೆ ತೀರ್ಪಿನ ಕುರಿತು ಮೌನಿಯಾಗಿದ್ದಾರೆ. ತೀರ್ಪು ಬಂದ ನಂತರ ಏನು ಪ್ರತಿಕ್ರಿಯಿಸುತ್ತಾರೆ ಎಂಬುದು ಕುತೂಹಲಕಾರಿಯಾಗಿದೆ.


Find Out More:

Related Articles: