ರಾಜ್ಯವನ್ನು ಅಭಿವೃದ್ಧಿ ಪಡಿಸದೆ ಸಿಎಂ ಕುರ್ಚಿಯಿಂದ ಕೆಳಗಿಳಿಯುವುದಿಲ್ಲ

somashekhar

ಹಾವೇರಿ: ನಾನು ಮೊದಲಿನಿಂದಲೂ ಈಗಲೂ ರೈತರ ಪರ ಇದ್ದೇನೆ, ಅಭಿವೃದ್ಧಿ ಯೇ ನನ್ನ ಮೂಲ ಮಂತ್ರ, ರಾಜ್ಯದ ಜನರು ಪ್ರವಾಹಕ್ಕೆ ಸಿಲುಕಿ ಸಂಕಷ್ಟದಲ್ಲಿ ದ್ದಾರೆ ಅವರ ಸಮಸ್ಯೆಗಳಿಗೆ ಪರಿಹಾರ ನೀಡಿ, ರಾಜ್ಯವನ್ನು ಅಭಿವೃದ್ಧಿ ಪಡಿಸದ ಹೊರತು ನಾನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಯುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಗುಡುಗಿದ್ದಾರೆ. 

 ನೀರಾವರಿ ಯೋಜನೆಗಳ ಅನುಷ್ಠಾನ, ರೈತ ಬೆಳೆದ ಬೆಳೆಗೆ ಬೆಂಬಲ ಬೆಲೆ ಸೇರಿದಂತೆ ರೈತರ ಹಾಗೂ ರಾಜ್ಯದ ಸರ್ವತೋಮುಖ ಅಭಿವೃದ್ಧಿ ಗೆ ಆದ್ಯತೆ ನೀಡಲಾಗುವುದೆಂದು ಹೇಳಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿನ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಗೂ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ವಿಶೇಷವಾಗಿ ಅತಿವೃಷ್ಟಿಯಿಂದಾಗಿ ಉಂಟಾದ ಸಮಸ್ಯೆಗಳು, ಅದರಿಂದ ಬಾಧಿತರಾದವರಿಗೆ ಪರಿಹಾರ ವಿತರಣೆ ಯಾವ ರೀತಿಯಾಗಿದೆ ಎಂಬೆಲ್ಲಾ ವಿಚಾರಗಳ ಬಗ್ಗೆ ಚರ್ಚಿಸಲಿದ್ದೇವೆ. ನಿನ್ನೆಯೂ ಸಹ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ್ದೇನೆ. ನೂರು ದಿನಗಳು ಕಳೆದಿವೆ. ಬರುವ ನೂರು ದಿನಗಳಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿ ಕಡೆಗೆ ಆದ್ಯತೆ ನೀಡಲಾಗುವುದು. ವಿರೋಧ ಪಕ್ಷಗಳ ಮಾತನ್ನು ಕೇಳಿ ಯಾರು ಬೇಸರಪಡುವ ಅಗತ್ಯವಿಲ್ಲ. ಸರ್ಕಾರ ನಿಮ್ಮ ಜೊತೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ನಾಲ್ಕು ಸಾವಿರ ರೂ.ಗಳನ್ನು ರೈತರಿಗೆ ನೀಡಿದ್ದೇವೆ. ಅದರಲ್ಲಿ 2000 ರೂ.ಗಳನ್ನು ಬಿಡುಗಡೆಯಾಗಿದೆ. ಮೋದಿ ಅವರು ಸಹ ಆರು ಸಾವಿರ ರೂ.ಗಳನ್ನು ರೈತರಿಗೆ ನೀಡುತ್ತಿದ್ದಾರೆ. ರಾಜ್ಯದಲ್ಲಿ ವಿದ್ಯುತ್ ಅಭಾವವಿಲ್ಲ. ಸಾಕಷ್ಟು ವಿದ್ಯುತ್ ಇದೆ. ಇದರ ಉಪಯೋಗಪಡೆದು ಕೃಷಿಕನಿಗೆ ಅನುಕೂಲ ಕಲ್ಪಿಸಲಾಗುವುದು. ಇಷ್ಟೊಂದು ಪ್ರಮಾಣದಲ್ಲಿ ವಿದ್ಯುತ್ ಇರುವುದು ದಾಖಲೆಯಾಗಿದೆ ಎಂದು ಹೇಳಿದರು. ದೇವೇಗೌಡರೊಂದಿಗೆ ತಾವು ಮಾತನಾಡಿಲ್ಲ ಎಂದಿದ್ದೀರಿ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾವುದೇ ವಿಷಯವನ್ನು ಮಾಧ್ಯಮದವರ ಮುಂದೆ ಚರ್ಚಿಸಲು ಇಷ್ಟ ಪಡುವುದಿಲ್ಲ ಎಂದ ಅವರು, ಅಗತ್ಯ ಬಂದಾಗ ಮಾತನಾಡುತ್ತೇನೆ.ನನ್ನ ಅವರ ಸಂಬಂಧ ಚೆನ್ನಾಗಿ ಎಂದಷ್ಟೇ ಹೇಳಲು ಬಯಸುತ್ತೇನೆ ಎಂದರು. ಬಿಜೆಪಿಯವರೇ ಷಡ್ಯಂತ್ರ ರೂಪಿಸಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆ ಕುರಿತಂತೆ ಕೇಳಲಾದ ಪ್ರಶ್ನೆಗೆ, ನನ್ನ ಬಗ್ಗೆ ಇಷ್ಟೆಲ್ಲ ಚಿಂತೆ ಮಾಡುತ್ತಿದ್ದಾರೆ ಎಂದು ಮರು ಪ್ರಶ್ನಿಸಿದ್ದಾರೆ.

Find Out More:

Related Articles: