ಮುಂಬಯಿ: ಕ್ಷಣಕ್ಕೊಂದು ತಿರುವುಗಳನ್ನು ಪಡೆದುಕೊಂಡು ಕೊನೆಗೂ ಮುಖ್ಯಮಂತ್ರಿ ಪಡ್ನವೀಸ್ ರಾಜೀನಾಮೆ ನೀಡಿದರು. ಇದೀಗ ಮಹಾ ಮೈತ್ರಿಯ ಮುಖ್ಯ ಭಾಗವಾಗಿ ಠಾಕ್ರೆ ತಮ್ಮ ತಂದೆಗೆ ಸಿಎಂ ಆಗುತ್ತೇನೆಂದು ನೀಡಿದ ಮಾತನ್ನು ಡಿಸೆಂಬರ್ 1ರಂದು ಪ್ರಮಾಣವಚನ ಸ್ವೀಕರಿಸುವ ಮೂಲಕ ಈಡೇರಿಸುತ್ತಿದ್ದಾರೆ.
ಶಿವಸೇನೆ ವರಿಷ್ಠ ಉದ್ಧವ್ ಠಾಕ್ರೆ ಅವರು ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಯ ದೇವೇಂದ್ರ ಫಡ್ನವಿಸ್ ರಾಜೀನಾಮೆ ಬಳಿಕ ಮಂಗಳವಾರ ಸಂಜೆ ಮುಂಬಯಿಯ ಖಾಸಗಿ ಹೋಟೆಲ್‌ನಲ್ಲಿನಡೆದ ಶಿವಸೇನೆ, ಎನ್‌ಸಿಪಿ, ಕಾಂಗ್ರೆಸ್ ಮೈತ್ರಿಕೂಟ 'ಮಹಾ ವಿಕಾಸ ಅಗಾಡಿ'ಯ ಶಾಸಕಾಂಗ ಪಕ್ಷದ ಸಭೆಯಲ್ಲಿಉದ್ಧವ್ ಅವರನ್ನು ಶಾಸಕಾಂಗ ನಾಯಕನಾಗಿ ಆಯ್ಕೆ ಮಾಡಲಾಗಿದೆ.
ಮಹಾದಲ್ಲಿ ಠಾಕ್ರೆ ಪೂರ್ಣಾವಧಿ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಎನ್‌ಸಿಪಿ ಈಗಾಗಲೇ ಸ್ಪಷ್ಟಪಡಿಸಿದೆ. ಎನ್‌ಸಿಪಿ ಶಾಸಕಾಂಗ ಪಕ್ಷದ ನಾಯಕ ಜಯಂತ್ ಪಾಟೀಲ್ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಬಾಳಾಸಾಹೇಬ್ ಥೋರಟ್ ಅವರು ಉಪ ಮುಖ್ಯಮಂತ್ರಿಗಳಾಗಿ ಆಯ್ಕೆಯಾಗಿದ್ದಾರೆ. ಭಾನುವಾರ (ಡಿ.1) ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆ ಇದೆ. ಮಹಾರಾಷ್ಟ್ರ ವಿಧಾನಸಭೆಯ ವಿಶೇಷ ಅಧಿವೇಶನ ಬುಧವಾರ ನಡೆಯಲಿದ್ದು, ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಂಗಾಮಿ ಸ್ಪೀಕರ್ ಆಗಿ ಬಿಜೆಪಿಯ ಕಾಳಿದಾಸ ಕೊಳಂಬಾಕರ್ ಅವರನ್ನು ನೇಮಕ ಮಾಡಿರುವ ರಾಜ್ಯಪಾಲ ಭಗತ್‌ಸಿಂಗ್ ಕೋಶ್ಯಾರಿ ಅವರು ಮಂಗಳವಾರ ಸಂಜೆ ಕಾಳಿದಾಸ ಅವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ಬೆಳಗ್ಗೆ 8 ಗಂಟೆಗೆ ಅಧಿವೇಶನ ಆರಂಭವಾಗಲಿದೆ. ಸರಕಾರ ರಚನೆ ಅನಿಶ್ಚಿತತೆ ಹಿನ್ನೆಲೆಯಲ್ಲಿ ಆಯ್ಕೆಯಾಗಿ ಒಂದು ತಿಂಗಳು ಕಳೆದರೂ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸುವ ಅವಕಾಶ ಒದಗಿರಲಿಲ್ಲ. ಇದೀಗ ಆ ಭಾಗ್ಯ ಒಲಿದು ಬಂದಿದ್ದು ಶಾಸಕರು ನಿರಾಳರಾಗಿದ್ದಾರೆ.
ಶಿವಸೇನೆ,ಎನ್‌ಸಿಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಶಾಸಕರೆಲ್ಲರೂ ಉದ್ಧವ್ ಠಾಕ್ರೆಯನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಶರದ್ ಪವಾರ್ ಅವರು ಉದ್ಧವ್ ಠಾಕ್ರೆ ಅವರನ್ನು ಹೂಗುಚ್ಚ ನೀಡಿ ಅಭಿನಂದಿಸಿದರುಉದ್ಧವ್ ಬಾಳಾಸಾಹೇಬ್ ಠಾಕ್ರೆ ಅವರೇ ನಮ್ಮ ಮೈತ್ರಿಕೂಟದ ನೇತೃತ್ವ ವಹಿಸಬೇಕು. ಮೈತ್ರಿಕೂಟ ಸರಕಾರದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಬೇಕು ಎಂದು ಎನ್‌ಸಿಪಿ ನಾಯಕ ಜಯಂತ್ ಪಾಟಿಲ್ ಅವರು ಹೇಳಿದರು.