‘ಕುಣಿಯೋಕ್ ಆಗದವರು ನೆಲ ಡೊಂಕೆಂದರು’ ಮಹಾ ಡ್ರಾಮಕ್ಕೆ ಪ್ರಕಾಶ್ ವ್ಯಾಖ್ಯಾನ

Soma shekhar
ಕಾಲಚಕ್ರ ಉರುಳುತ್ತಲೇ ಇದೆ. 162 ಬೆಂಬಲವಿರುವವರು ಸುಮ್ಮನಿದ್ದರೆ, 106+4 ಸೇರಿ ಮುಖ್ಯಮಂತ್ರಿ ಉಪ ಮುಖ್ಯಮಂತ್ರಿ ಯಾಗಿದ್ದರೆ. ಇದೀಗ ಭಾರೀ ಹೈಡ್ರಾಮ ನಡೆದಿದೆ. ಕುಣಿಯೋಕೆ ಆಗದವರು ನೆಲ ಡೊಂಕೆಂದರು ಎಂದು ಮಹಾರಾಷ್ಟ್ರದ ರಾಜಕೀಯದ ಬಗ್ಗೆ ಸೌತ್ ಇಂಡಿಯನ್ ಸ್ಟಾರ್ ಪ್ರಕಾಶ್ ರಾಜ್ ಪ್ರತಿಕ್ರಿಯಿಸಿದ್ದಾರೆ. 
 
ರಾಷ್ಟ್ರದ ರಾಜಕೀಯ ಮಹಾ ಡ್ರಾಮ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದ್ದು ಸಾಮಾಜಿಕ ಜಾಲತಾಣಗಳಲ್ಲೂ ಸದ್ದಾಗುತ್ತಿದೆ. ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ಟ್ವಿಟ್ಟರ್‌ನಲ್ಲಿ ಮಹಾರಾಷ್ಟ್ರ ರಾಜಕೀಯ ಸರ್ಕಸ್ ಕುರಿತಾಗಿ ಪ್ರತಿಕ್ರಿಯೆ ನೀಡಿದ್ದು ಕುಣಿಯೋಕ್ ಆಗದವರು ನೆಲ ಡೊಂಕೆಂದರು, ನಾಚಿಕೆ ಆಗಲ್ವೇ ಎಂದು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
 
ಯಾರು ವೇದಿಕೆ ಹತ್ತಿರುತ್ತಾರೋ ಅವರು ಕುಡಿಯಬೇಕು. ನೃತ್ಯಗಾರ ಕುಣಿಯಲು ಸಾಧ್ಯವಿಲ್ಲ ಎಂದಾದರೆ ವೇದಿಕೆಯಿಂದ ಕೆಳಗೆ ಇಳಿಯಬೇಕು ಎಂದು ಟ್ವೀಟ್ ಮಾಡಿದ್ದಾರೆ. ಇದಕ್ಕೂ ಮುನ್ನ ಮಹಾರಾಷ್ಟ್ರ ಬೆಳವಣಿಗೆಗಳ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಜೊತೆಗೆ ಮಾಧ್ಯಮಗಳನ್ನು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡಿದ್ದರು. ಪ್ರಕಾಶ್ ರಾಜ್ ಟ್ವೀಟ್‌ಗೆ ಹಲವು ನೆಟ್ಟಿಗರು ಪರ ಹಾಗೂ ವಿರೋಧವಾದ ಪ್ರತಿಕ್ರಿಯೆ ನೀಡಿದ್ದಾರೆ. ಆ ವಿಷಯಗಳಿಗೆ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. 
 
ಕಾಂಗ್ರೆಸ್ ಕೂಡಾ ಮಹಾರಾಷ್ಟ್ರ ರಾಜಕೀಯ ಬೆಳವಣಿಗೆಗಳ ಕುರಿತಾಗಿ ಪ್ರತಿಕ್ರಿಯೆ ನೀಡಿದ್ದು ಮಹಾರಾಷ್ಟ್ರದಲ್ಲಿ ನಾಳೆಯೇ ವಿಶ್ವಾಸಮತ ಯಾಚಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿರುವುದು,ಮಹಾರಾಷ್ಟ್ರ ರಾಜ್ಯಪಾಲರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಗೆ ಮಾಡಿದ ಕಪಾಳ ಮೋಕ್ಷವಾಗಿದೆ. ರಾತ್ರೋರಾತ್ರಿ ಸಭೆ ನಡೆಸಿ, ಸರ್ಕಾರ ರಚಿಸಿ, ಪ್ರಮಾಣ ವಚನ ಸ್ವೀಕರಿಸುವಂತಹ ತುರ್ತು ಏನಿತ್ತು ಎಂದು ಟ್ವಿಟ್ಟರ್‌ನಲ್ಲಿ ಪ್ರಶ್ನಿಸಿದ ಕರ್ನಾಟಕ ಕಾಂಗ್ರೆಸ್ ಬಿಜೆಪಿ ವಿರುದ್ಧ ಹರಿಹಾಯ್ದಿದೆ. ಮಾಡಿದ್ದುಣ್ಣೊ ಮಹರಾಯ ಎಂಬುದು ಲೋಕ ರೂಢಿ. ಮಾಡಿದ್ದರ ಪ್ರತಿಫಲವನ್ನು ಫಡ್ನವೀಸ್ ಉಣ್ಣುತ್ತಿದ್ದಾರೆ. (ಯಡಿಯೂರಪ್ಪ ನವರೂ ಉಣ್ಣುತ್ತಾರೆ) ಕಾಲಚಕ್ರಕ್ಕೆ ಸಿಲುಕಿ ನಲುಗಿದ್ದಾರೆ. ಅಧಿಕಾರ ದಾಹಿ ಬಿಜೆಪಿ ತನ್ನ ಕೃತ್ಯಗಳಿಗೆ ತಾನೇ ಬೆಲೆ ತೆರುತ್ತಿದೆ. ಅಧಿಕಾರದ ಹಪಹಪಿ, ಸರ್ಕಾರಗಳನ್ನು ಕೆಡವುವುದು, ಚುನಾವಣೆ ತರುವುದನ್ನು ಬಿಜೆಪಿ ಇನ್ನಾದರೂ ಬಿಡಲಿ ಎಂದಿದ್ದಾರೆ. ಭಾರೀ ಕುತೂಹಲ ಮೂಡಿಸಿರುವ ಇದು ಮುಂದೇನಾಗುತ್ತದೆ ಎಂದು ಕಾದುನೋಡಬೇಕಾಗಿದೆ.

Find Out More:

Related Articles: