'ಯುವಕರು ಮೋದಿ, ಅಮಿತ್ ಶಾರನ್ನು ನಂಬಿ ಕೆಟ್ಟಿದ್ದಾರೆ'

Soma shekhar
ಮುಂಬೈ: ಇಂದಿನ ಯುವಕರೇ ಮುಂದಿನ ಪ್ರಜೆಗಳು. ಆದರೆ ಈಗಿನ ಯುವಕರು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಮಾಯಾ ಜಾಲದಲ್ಲಿ ಸಿಲುಕಿದ್ದಾರೆ. ಅವರ ಅರ್ಥವಿಲ್ಲದ ಬಣ್ಣದ ಮಾತುಗಳನ್ನು ನಂಬಿ ಕೆಟ್ಟಿದ್ದಾರೆ. ಹೌದು, ಇದು ಸತ್ಯ ಎಂದು ವಿರೋಧ ಪಕ್ಷದ ಮಾಜಿ ನಾಯಕರೊಬ್ಬರು ಕೇಂದ್ರದ ವಿರುದ್ಧ ಗುಡುಗಿದ್ದಾರೆ. ರಾಷ್ಟ್ರದ ಆರ್ಥಿಕತೆ ಕುಸಿತ ಮತ್ತು ನಿರುದ್ಯೋಗ ಪ್ರಮಾಣ ಹೆಚ್ಚಳದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಅವರನ್ನು ಬೆಂಬಲಿಸಿದ್ದ ಯುವ ಜನತೆಯೂ ಇಂದು ಕಳವಳಕ್ಕೆ ಒಳಗಾಗಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದು ಇದೀಗ ರಾಷ್ಟ್ರಾದ್ಯಂತ ಚರ್ಚೆಗೆ ಒಳಗಾಗಿದೆ. 
 
ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್‌ ಶಾ ಅವರನ್ನು ಬೆಂಬಲಿಸಿದ್ದ ಯುವ ಜನತೆ ಇಂದು ಬೆಲೆ ಏರಿಕೆ ಬಗ್ಗೆ ಚಿಂತೆಗೀಡಾಗಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯ ಪಟ್ಟಿದ್ದಾರೆ. ಭಾರತದ ಆರ್ಥಿಕತೆ ಕುಸಿದಿದೆ. ನಿರುದ್ಯೋಗ ಮತ್ತು ಹಣದುಬ್ಬರ ಹೆಚ್ಚಾಗಿದೆ. ಬೆಲೆ ಏರಿಕೆಯಿಂದ ಪ್ರತಿಯೊಬ್ಬರು ದಿಗಿಲುಗೊಂಡಿದ್ದಾರೆ. ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಅವರನ್ನು ಬೆಂಬಲಿಸಿದ್ದ ಯುವ ಜನತೆಯೂ ರಾಷ್ಟ್ರದ ಆರ್ಥಿಕ ಪರಿಸ್ಥಿತಿಯನ್ನು ಕಂಡು ಗಾಬರಿಯಾಗಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಸುದ್ದಿಗಾರರಿಗೆ ತಿಳಿಸಿದ್ದಾರೆ.
 
ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಪೌರತ್ವ ತಿದ್ದುಪಡಿ ಕಾಯಿದೆ ಮುಸ್ಲಿಮರ ವಿರೋಧಿ ಎಂಬುದನ್ನು ಸಾಭೀತು ಪಡಿಸಲು ಅಮಿತ್‌ ಶಾ ಸವಾಲು ಹಾಕಿದ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಖರ್ಗೆ, ''ರಾಹುಲ್‌ ಗಾಂಧಿ ಮಾತ್ರವಲ್ಲ ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಟ್ಟುಕೊಂಡಿರುವ ಎಲ್ಲರೂ ಪೌರತ್ವ ತಿದ್ದುಪಡಿ ಕಾಯಿದೆ ಹೇಗೆ ದುರುಪಯೋಗ ಮಾಡಲಾಗುತ್ತಿದೆ ಎಂಬುದನ್ನು ವಿವರಿಸಿದ್ದಾರೆ'' ಎಂದು ತಿಳಿಸಿದ್ದಾರೆ.  ಶುಕ್ರವಾರ ಅಮಿತ್‌ ಶಾ, "ಪೌರತ್ವ ತಿದ್ದುಪಡಿ ಕಾಯಿದೆ ಮುಸ್ಲಿಮರ ಪೌರತ್ವ ಕಿತ್ತುಕೊಳ್ಳುವ ಬಗ್ಗೆ ಸಾಬೀತು ಪಡಿಸಲು ರಾಹುಲ್‌ ಗಾಂಧಿಗೆ ಸವಾಲು ಹಾಕುತ್ತಿದ್ದೇನೆ. ರಾಷ್ಟ್ರದಲ್ಲಿ ಶಾಂತಿಯನ್ನು ಕದಡುವ ಪ್ರಯತ್ನ ಬೇಡ. ಜನರನ್ನು ದಾರಿ ತಪ್ಪಿಸಬೇಡಿ ಎಂದಿದ್ದರು.

Find Out More:

Related Articles: