ಶಿಕ್ಷಕರು ಕೆಲಸಕ್ಕೆ ಹಾಜರಾಗುವುದು ಕಡ್ಡಾಯ : ಆದರೆ ಕೆಲವು ಶಾಲೆಯ ಶಿಕ್ಷಕರಿಗೆ ವಿನಾಯಿತಿ..!!

Soma shekhar

ಕೊರೊನಾ ವೈರಸ್ ಹಿನ್ನಲೆ  ಇಡೀ ದೇಶವೇ ಲಾಕ್ ಡೌನ್  ಮಾಡಲಾದ ಕಾರಣ ಎಲ್ಲಾ ಶಾಲಾ ಕಾಲೇಜುಗಳನ್ನು ಕಡ್ಡಾಯವಾಗಿ ಬಂದ್ ಮಾಡಲಾಗಿತ್ತು. ಇದರಿಂದ 1 ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ರದ್ದುಗೊಳಿಸಲಾಯಿತು. ಆದರೆ  ಈಗ ಲಾಕ್ ಡೌನ್ ಆಗಿದ್ದ ದೇಶ ಅನ್ ಲಾಕ್ ಆಗುತ್ತಿರುವುದರಿಂದ ಎಲ್ಲಾ ವಲಯಗಳೂ ಕೂಡ ಚೇತರಿಸಿಕೊಳ್ಳುತ್ತಿದೆ. ಅದರಂತೆ ರಾಜ್ಯದ ಶಿಕ್ಷಣ ಇಲಾಖೆಯೂ ಕೂಡ ಶಾಲೆಗಳನ್ನು ತೆರೆಯುವುದರ ಬಗ್ಗೆಯೂ ಕೂಡ ಚಿಂತನೆಯನ್ನು ನಡೆಸಲಾಗುತ್ತಿದೆ. ಇದಕ್ಕೂ ಮುನ್ನ ಶಾಲೆಯ ಆರಂಭಕ್ಕೆ ಸಿದ್ಧತೆಯನ್ನು ಮಾಡಿಕೊಳ್ಳಲೆಂದು ಶಾಲಾ ಶಿಕ್ಷಕರು ಕಡ್ಡಾಯವಾಗಿ ಕೆಲಸಕ್ಕೆ ಹಾಜರಾಗುವಂತೆ ತಿಳಿಸಿದೆ. ಆದರೆ ಇದರಲ್ಲಿ ಕೆಲ ಶಾಲೆಯ ಶಿಕ್ಷಕರಿಗೆ ವಿನಾತಿಯಿಯನ್ನು ನೀಡಲಾಗಿದೆ. ಅಷ್ಟಕ್ಕೂ  ವಿನಾಯಿತಿಯನ್ನು ಪಡೆದ ಆ ಶಾಲೆಗಳು ಯಾವುವು..?

 

ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ದಿನಾಂಕ 05-06-2020ರಿಂದ ಶಾಲೆಗೆ ಹಾಜರಾಗಿ ಶಾಲೆ ಪುನರಾರಂಭದ ಕುರಿತು ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚಿಸಲಾಗಿತ್ತು. ದೂರದ ಊರುಗಳಿಂದ ಬರುವ ಶಿಕ್ಷಕರಿಗೆ ಸಾರಿಗೆ ವ್ಯವಸ್ಥಿ ಇಲ್ಲದ ಕಾರಣ ದಿನಾಂಕ 05-06-2020ರ ಬದಲು, 08-06-2020ರಂದು ಶಾಲೆಗೆ ಕರ್ತವ್ಯದ ಮೇಲೆ ಹಾಜರಾಗಲು ಅನುಮತಿ ನೀಡಲಾಗಿತ್ತು. ಆದ್ರೇ ಕಂಟೈನ್ಮೆಂಟ್ ಝೋನ್ ನಲ್ಲಿನ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರಿಗೆ ಕರ್ತವ್ಯಕ್ಕೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ. ಈ ಮೂಲಕ ಸಾರ್ವಜನಿಕ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ನೀಡಿದೆ.

 

ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ದಿನಾಂಕ 05-06-2020ರಂದು ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲ ಶಿಕ್ಷಕರನ್ನು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿತ್ತು. ಸಾರಿಗೆ ವ್ಯತ್ಯಯದಿಂದ ದಿನಾಂಕ 08-06-2020ರಂದು ಕಡ್ಡಾಯವಾಗಿ ಹಾಜರಾಗುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿತ್ತು.

 

ಮುಂದುವರೆದಂತೆ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಕೋವಿಡ್-19 ಅಂಗವಾಗಿ ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಿದ್ದು, ಇನ್ನೂ ಕೆಲವು ಶಾಲೆಗಳನ್ನು ಕ್ವಾರಂಟೈನ್ ಕೇಂದ್ರಗಳನ್ನಾಗಿ ಬಳಸಿಕೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಕಂಟೈನ್ಮೆಂಟ್ ಝೋನ್ ವ್ಯಾಪ್ತಿಯಲ್ಲಿ ಬರುವ ಮತ್ತು ಕ್ವಾರಂಟೈನ್ ಕೇಂದ್ರಗಳನ್ನಾಗಿ ಉಪಯೋಗಿಸುತ್ತಿರುವ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರಿಗೆ ಕರ್ತವ್ಯಕ್ಯೆ ಹಾಜರಾಗುವುದರಿಂದ ವಿನಾಯಿತಿ ನೀಡಿದೆ ಎಂಬುದಾಗಿ ತಿಳಿಸಿದ್ದಾರೆ.

 

ಇನ್ನೂ ಕ್ವಾರಂಟೈನ್ ಕೇಂದ್ರಗಳನ್ನಾಗಿ ಬಳಸಲಾಗುತ್ತಿರುವ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುವ ಶಿಕ್ಷಕರು ಸಂಬಂಧಿಸಿದ ಶಾಲೆಯನ್ನು ಕ್ವಾರಂಟೈನ್ ಕೇಂದ್ರದಿಂ ಮುಕ್ತಗೊಳಿಸುವವರೆಗೆ ಕರ್ತವ್ಯಕ್ಕೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ. ಅಲ್ಲದೇ ಕ್ವಾರಂಟೈನ್ ಝೋನ್ ಅಡಿಯಲ್ಲಿ ವಾಸಿಸುತ್ತಿರುವ ಶಿಕ್ಷಕರು ಸಂಬಂಧಿಸಿದ ಪ್ರದೇಶವನ್ನು ಕಂಟೈನ್ಮೆಂಟ್ ಝೋನ್ ನಿಂದ ಸಡಿಲಗೊಳಿಸವುವವರೆಗೆ ಕರ್ತವ್ಯಕ್ಕೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ.

 

ಬಿಬಿಎಂಪಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಈ ಮೇಲಿ ತಿಳಿಸಿದಂತಹ ಶಾಲೆಗಳನ್ನು ಕ್ವಾರಂಟೈನ್ ಝೋನ್ ಮತ್ತು ಕ್ವಾರಂಟೈನ್ ಕೇಂದ್ರದಿಂದ ಮುಕ್ತಗೊಳಿಸಿದ ನಂತ್ರ ಶಾಲೆಗಳ ಪುನರಾರಂಭದ ಕುರಿತಂತೆ ಮುಂದಿನ ದಿನಗಳಲ್ಲಿ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳತಕ್ಕದ್ದು ಎಂಬುದಾಗಿ ಆದೇಶದಲ್ಲಿ ಸೂಚಿಸಿದ್ದಾರೆ.

 

 

Find Out More:

Related Articles: