ಇಂದು ರಾಜ್ಯದಾಧ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಬರೆದ ವಿದ್ಯಾರ್ಥಿಗಳ ಸಂಖ್ಯೆ ಎಷ್ಟು ಗೊತ್ತಾ..?
ದಿನದಿಂದ ದಿನಕ್ಕೆ ಮುಂದೂಡುತ್ತಾ ವಿದ್ಯಾರ್ಥಿಗಳಲ್ಲಿ ಆತಂಕವನ್ನು ಸೃಷ್ಠಿಮಾಡಿದ್ದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಿ ಇಂದು ನಾಲ್ಕನೇ ದಿನದ ಪರೀಕ್ಷೆಯೂ ಕೂಡ ಯಶಸ್ವಿಯಾಗಿ ಮುಗಿದಿದೆ. ನಾಲ್ಕನೇ ದಿನದ ಪರಿಕ್ಷೆಯನ್ನು ರಾಜ್ಯಾಧ್ಯಂತ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದಾರೆ ಗೊತ್ತಾ..?
ಐದನೇ ದಿನವಾದ ಬುಧವಾರ ನಡೆದ ಎಸ್ಸೆಸ್ಸೆಲ್ಸಿ ಸಮಾಜವಿಜ್ಞಾನ ಪರೀಕ್ಷೆ ಸಾಮಾಜಿಕ ಸುರಕ್ಷಿತ ವಾತಾವರಣದಲ್ಲಿ ಉತ್ತಮವಾಗಿ ನಡೆದಿವೆ
ಐದನೇ ದಿನವಾದ ಬುಧವಾರ ನಡೆದ ಸಮಾಜವಿಜ್ಞಾನ ಪರೀಕ್ಷೆಗೆ ನೊಂದಾಯಿತ 7,84,287 ವಿದ್ಯಾರ್ಥಿಗಳ ಪೈಕಿ 7,68,341 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಒಟ್ಟಾರೆ ಶೇ. 97.96ರಷ್ಟು ಇಂದು ಹಾಜರಾತಿ ಇದೆ. 15,946 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ವಿಷಯದ ಪರೀಕ್ಷೆಗೆ ಕಳೆದ 2018-19ನೇ ಸಾಲಿಗೆ 7,77858 ವಿದ್ಯಾರ್ಥಿಗಳ ಪೈಕಿ 7,68,374 ವಿದ್ಯಾರ್ಥಿಗಳು ಹಾಜರಾಗಿದ್ದು, 9484 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಶೇ. 98.78 ಹಾಜರಾತಿ ಇತ್ತು ಎಂದು ಅವರು ಹೇಳಿದರು. ಮೊದಲ ಬಾರಿಗೆ 7,45,070 ಶಾಲಾ ವಿದ್ಯಾರ್ಥಿಗಳು ಹಾಗೂ 20, 991 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ.
ಕಂಟೈನ್ಮೆಂರಟ್ ಪ್ರದೇಶಗಳ 3363 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕೋವಿಡೇತರ ಅನಾರೋಗ್ಯ ಕಾರಣಗಳಿಂದ ವಿಶೇಷ ಕೊಠಡಿಗಳಲ್ಲಿ 613 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾದ ಯಾವುದೇ ಪ್ರಕರಣಗಳು ನಡೆದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಸರ್ಕಾರಿ/ಖಾಸಗಿ ವಸತಿ ನಿಲಯಗಳಲ್ಲಿ ಇದ್ದು 1442 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ನೆರೆ ರಾಜ್ಯಗಳಿಂದ 645ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿದ್ದು, 52 ವಿದ್ಯಾರ್ಥಿಗಳು ಗೈರು ಹಾಜರಿಯಾಗಿ 593ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 12644 ವಲಸೆ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿದ್ದು, 12541 ವಿದ್ಯಾರ್ಥಿಗಳು ಹಾಜರಾಗಿದ್ದರೆ, 103 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಹೋಂ ಕ್ವಾರಂಟೈನಲ್ಲಿರುವ ಹಾಗೂ ಕೋವಿಡ್ ಪಾಸಿಟೀವ್ ಎಂದು ಗುರುತಿಸಲಾದ ವಿದ್ಯಾರ್ಥಿಗಳಿಗೆ ಈಗಿನ ಪರೀಕ್ಷೆಯನ್ನು ಬರೆಯುವುದರಿಂದ ವಿನಾಯ್ತಿ ನೀಡಲಾಗಿದೆ. ಈ ಎಲ್ಲರಿಗೂ ಸಕಾರಣದ ಆಧಾರದ ಮೇಲೆ ಮುಂದಿನ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡುವ ವ್ಯವಸ್ಥೆ ಮಾಡಲಾಗುವುದು. ಪರೀಕ್ಷಾ ಕೇಂದ್ರಕ್ಕೆ 3212 ಬಸ್ ಹಾಗೂ ಇತರೆ ವಾಹನಗಳನ್ನು ಒಪ್ಪಂದದ ಮೇರೆಗೆ ಪಡೆದು ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಸಾರಿಗೆ ಸೌಲಭ್ಯ ಒದಗಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.