ಅಯೋಧ್ಯೆಯ ರಾಮಮಂದಿರ ನಿರ್ಮಾಣದ ಶಿಲಾನ್ಯಾಸದ ಸಿದ್ಧತೆಗಳು ಹೇಗಿದೆ ಗೊತ್ತಾ..?

Soma shekhar
ದಶಕಗಳ ವಿವಾಧಕ್ಕೆ ತೆರೆ ಬಿದ್ದು ವಿವಾಧಿತ ಜಾಗದಲ್ಲಿ ಸುಂದರವಾದ ರಾಮಮಂದಿರದ ನಿರ್ಮಾಣಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ರಾಮ ಮಂದಿರದ ಶಿಲಾನ್ಯಾಸಕ್ಕೆ ಈಗಾಗಲೇ ಮುಹೂರ್ತ ಫಿಕ್ಸ್ ಆಗಿದ್ದು  ಈ ಮುಹೂರ್ತಕ್ಕೆ ಪ್ರಧಾನಿ ಮೋದಿಯವರನ್ನು ಆಹ್ವಾನಿಸಲಾಗಿದೆ. ಮೋದಿ ಆಗಮನಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು ಉತ್ತರ ಪ್ರದೇಶದ ಮುಖ್ಯ ಮಂತ್ರಿ ಇದರ ಸಂಪೂರ್ಣ ಜವಾಬ್ದಾರಿಯನ್ನು ಹೊತ್ತಿದ್ದಾರೆ.


 

ಅಯೋಧ್ಯೆರಾಮ ಮಂದಿರ ನಿರ್ಮಾಣ ಸ್ಥಳದಲ್ಲಿ ಆಗಸ್ಟ್‌ 5ರಂದು ಭೂಮಿ ಪೂಜೆ ನೆರವೇರಲಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಲಿದ್ದಾರೆ.



ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ಭೂಮಿ ಪೂಜೆ ನೆರವೇರಿಸಿ, ರಾಮಮಂದಿರಕ್ಕೆ ಅಡಿಗಲ್ಲು ಹಾಕಲಿದ್ದಾರೆ. ನಂತರ ದೇವಾಲಯದ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ. ಸಮಾರಂಭದಲ್ಲಿ ಹಲವು ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ.ರಾಮ ಮಂದಿರಕ್ಕಾಗಿ ನಡೆದ ಹೋರಾಟದೊಂದಿಗೆ ನಿಕಟ ಸಂಬಂಧ ಹೊಂದಿರುವ ಬಿಜೆಪಿ ಹಿರಿಯ ನಾಯಕ ವಿನಯ್‌ ಕಟಿಯಾರ್‌ ಅವರು, 'ದೇವಾಲಯದ ಭೂಮಿ ಪೂಜೆ ನೆರವೇರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್‌ 5ರಂದು ಅಯೋಧ್ಯೆಗೆ ಆಗಮಿಸಲಿದ್ದು, ಕಾರ್ಯಕ್ರಮದ ಸಿದ್ಧತೆಗಳನ್ನು ನೋಡಿಕೊಳ್ಳುವುದು ರಾಜ್ಯದ ಮುಖ್ಯಮಂತ್ರಿಯ ಜವಾಬ್ದಾರಿಯಾಗಿದೆ' ಎಂದು ಹೇಳಿದ್ದಾರೆ.



ಕಾರ್ಯಕ್ರಮದ ಸಲುವಾಗಿ ಇಡೀ ಅಯೋಧ್ಯೆಯನ್ನು ಅಲಂಕರಿಸಲಾಗುತ್ತಿದ್ದು, ಯೋಗಿ ಆದಿತ್ಯನಾಥ್‌ ಅವರು ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಶನಿವಾರ ಅಯೋಧ್ಯೆಯ ಹಲವು ಪ್ರದೇಶಗಳಲ್ಲಿ ಮಣ್ಣಿನ ದೀಪಗಳು ಮತ್ತು ವರ್ಣರಂಜಿತ ದೀಪಗಳನ್ನು ಬೆಳಗಿಸಲಾಗಿದೆ.ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಸೇರಿದಂತೆ ರಾಜ್ಯದ ಉನ್ನತ ಅಧಿಕಾರಿಗಳು ಕಳೆದ ಒಂದು ತಿಂಗಳಿನಿಂದ ಅಯೋಧ್ಯೆಗೆ ನಿರಂತರವಾಗಿ ಭೇಟಿ ನೀಡುತ್ತಿದ್ದಾರೆ. ರಸ್ತೆಗಳ ಅಗಲೀಕರಣ ಹಾಗೂ ಇತರ ಅಭಿವೃದ್ಧಿ ಚಟುವಟಿಕೆಗಳೂ ನಡೆಯುತ್ತಿವೆ. ಇಡೀ ನಗರದ ಚಿತ್ರಣವೇ ಬದಲಾದಂತಾಗಿದೆ.



ನಗರದಲ್ಲಿ ಕೋವಿಡ್-19 ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದೆ ಎಂದು ಅಯೋಧ್ಯೆಯ ಹಿರಿಯ ಪೊಲೀಸ್‌ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಹೇಳಿದ್ದಾರೆ. 'ಯಾವುದೇ ಸ್ಥಳದಲ್ಲಿ ಐದಕ್ಕಿಂತ ಹೆಚ್ಚು ಜನರು ಒಟ್ಟುಗೂಡಬಾರದು ಎಂದು ನಾವು ಎಲ್ಲರಲ್ಲಿ ವಿನಂತಿಸಿದ್ದೇವೆ. ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ 12 ಸ್ಥಳಗಳಲ್ಲಿ ಬದಲಿ ಮಾರ್ಗಗಳನ್ನು ಗುರುತಿಸಲಾಗಿದೆ' ಎಂದು ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್‌ 2019ರ ನವೆಂಬರ್‌ನಲ್ಲಿ, ರಾಮ ಮಂದಿರ ನಿರ್ಮಾಣಕ್ಕೆ ನಿವೇಶನ ಹಸ್ತಾಂತರಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

Find Out More:

Related Articles: