ಮಾತೃ ಭಾಷೆಯಲ್ಲಿನ ಅಧ್ಯಯನದ ಕುರಿತು ಪ್ರಧಾನಿ ಮೋದಿ ಹೇಳಿದ್ದೇನು..?
ಭಾರತ ತನ್ನ 75 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಿರುವ 2022 ವೇಳೆಗೆ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು (ಎನ್ಸಿಎಫ್) ಸಿದ್ಧಗೊಳ್ಳಲಿದೆ ಎಂದರು. ಎನ್ಇಪಿ ಘೋಷಿಸಿದ ನಂತರ ಬೋಧನಾ ಮಾಧ್ಯಮ ಯಾವುದು? ಎಂಬ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಭಾಷೆ ಶಿಕ್ಷಣದ ಮಾಧ್ಯಮವಾಗಿದೆ, ಭಾಷೆಯೇ ಶಿಕ್ಷಣವಲ್ಲ ಎಂಬ ವೈಜ್ಞಾನಿಕ ಸತ್ಯವನ್ನು ಇಲ್ಲಿ ನಾವು ಅರ್ಥಮಾಡಿಕೊಳ್ಳಬೇಕು. ಮಕ್ಕಳು ಸುಲಭವಾಗಿ ಕಲಿಯಬಹುದಾದ ಯಾವುದೇ ಭಾಷೆಯಾಗಿರಲಿ ಅದು ಬೋಧನಾ ಮಾಧ್ಯಮವಾಗಿರಬೇಕು ಎಂದರು.
ತರಗತಿಗಳಲ್ಲಿ ಹೇಳುವ ವಿಷಯ ಮಕ್ಕಳು ಅರ್ಥಮಾಡಿಕೊಳ್ಳಬಲ್ಲರೆ? ಎಂಬುದನ್ನು ಪರೀಕ್ಷಿಸಲು ನಾನು ಬಯಸುತ್ತೇನೆ. ಅವರು ಅದನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾದರೆ, ಈ ಪ್ರಕ್ರಿಯೆ ಹೆಚ್ಚು ಸುಲಭವಾಗಲಿದೆ ಎಂದರು. ಕಲಿಕೆಯ ವಿಷಯಕ್ಕಿಂತ ಮಕ್ಕಳು ಭಾಷೆಯನ್ನು ಅರ್ಥಮಾಡಿಕೊಳ್ಳಲು ಹೆಚ್ಚು ಶ್ರಮಿಸಬೇಕಾದ ಅಗತ್ಯವಿಲ್ಲ ಎಂದು ಹೇಳಿದರು.
ಶಿಕ್ಷಣದಲ್ಲಿ ಉನ್ನತ ಶ್ರೇಣಿ ಹೊಂದಿರುವ ಎಸ್ಟೋನಿಯಾ, ಐರ್ಲೆಂಡ್, ಫಿನ್ಲ್ಯಾಂಡ್, ಜಪಾನ್, ಪೋಲೆಂಡ್ ಮತ್ತು ದಕ್ಷಿಣ ಕೊರಿಯಾದಲ್ಲಿ ಮಕ್ಕಳಿಗೆ ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ಕಲಿಸಲಾಗುತ್ತಿದೆ ಎಂದು ಪ್ರಧಾನಿ ಹೇಳಿದರು. ಮಕ್ಕಳು ಮನೆಯಲ್ಲಿ ಬಳಸುವ ಭಾಷೆಯಲ್ಲಿ ತ್ವರಿತವಾಗಿ ಕಲಿಯಬಲ್ಲರು. ಅನ್ಯ ಭಾಷೆಯಲ್ಲಿ ಕಲಿಕೆ ಮಕ್ಕಳಲ್ಲಿ ಹೆಚ್ಚು ಒತ್ತಡವನ್ನುಂಟು ಮಾಡುತ್ತದೆ ಎಂದು ಪ್ರಧಾನಿ ನುಡಿದರು.